ಬಿಳಿ ಈರುಳ್ಳಿಯ ಜೊತೆ ಕೇವಲ 1 ಚಮಚ ಇದನ್ನು ಸೇರಿಸಿ ತಿಂದ್ರೆ ಏನಾಗತ್ತೆ ಗೊತ್ತಾ?

ಅನೇಕ ಆರೋಗ್ಯ ಸಮಸ್ಯೆಗಳಿಗೆ ಕೈಯಲ್ಲೇ ಔಷಧವಿದ್ದರೂ ಕೆಲವೊಮ್ಮೆ ಅನಾರೋಗ್ಯ ಕಾಡಿದಾಗ ನೆನಪಾಗುವುದಿಲ್ಲ. ಅಂತಹ ಅನೇಕ ಮೂಲಿಕೆಗಳು, ದಿನಬಳಕೆಯ ಆಹಾರ ಪದಾರ್ಥಗಳಲ್ಲಿ ಈರುಳ್ಳಿ ಕೂಡ ಒಂದು. ಚಿಕ್ಕ ಈರುಳ್ಳಿ ಆರೋಗ್ಯಕ್ಕೆ ಅನುಕೂಲವಾಗುವ ಅನೇಕ ಉಪಯುಕ್ತ ಗುಣಗಳನ್ನು ಹೊಂದಿದೆ.

ಈರುಳ್ಳಿ ಸಲ್ಫರ್ ಅನ್ನು ಹೊಂದಿರುತ್ತದೆ. ಅದರಲ್ಲೂ ಚಿಕ್ಕ ಈರುಳ್ಳಿಯಲ್ಲಿ ಗಂಧಕ ಹೆಚ್ಚಾಗಿರುತ್ತದೆ. ಹಾಗಾಗಿ ಇದನ್ನು ಪ್ರತಿನಿತ್ಯ ಆಹಾರದಲ್ಲಿ ಸೇವಿಸುವುದರಿಂದ ದೇಹಕ್ಕೆ ಶಕ್ತಿ ಬರುತ್ತದೆ. ಅಲ್ಲದೆ ಹವಾಮಾನ ಬದಲಾವಣೆಯಿಂದ ಆಗುವ ಅನಾರೋಗ್ಯವನ್ನೂ ಕೂಡ ತಪ್ಪಿಸಬಹುದಾಗಿದೆ.

ಈರುಳ್ಳಿಯನ್ನು ಜೇನುತುಪ್ಪದೊಂದಿಗೆ ಸೇವಿಸಿದರೆ ಹೆಚ್ಚು ಉಪಯುಕ್ತವಾಗಿದೆ. ದೇಹದಲ್ಲಿನ ಅನೇಕ ಸಮಸ್ಯೆಗಳಿಗೆ ಇದು ಪರಿಹಾರ ನೀಡುತ್ತದೆ. ಹಾಗಾದರೆ ಜೇನುತುಪ್ಪದೊಂದಿಗೆ ಈರುಳ್ಳಿಯನ್ನು ಸೇವಿಸಿದರೆ ಯಾವೆಲ್ಲಾ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು ಎನ್ನುವ ಮಾಹಿತಿ ಇಲ್ಲಿದೆ ನೋಡಿ.

​ಬ್ಯಾಕ್ಟೀರಿಯಾ ವಿರೋಧಿಯಾಗಿ ಕೆಲಸ ಮಾಡುತ್ತದೆ
ಚರ್ಮದ ಮೇಲಿನ ಬ್ಯಾಕ್ಟೀರಿಯಾಗಳನ್ನು ಹೋಗಲಾಡಿಸಲು ಈರುಳ್ಳಿ ಮತ್ತು ಜೇನುತುಪ್ಪ ಸಹಾಯ ಮಾಡುತ್ತದೆ. ಚರ್ಮದ ಮೇಲೆ ಅಲರ್ಜಿ ಗುಳ್ಳೆಗಳಾಗಿದ್ದರೆ ಈರುಳ್ಳಿ ಮತ್ತು ಜೇನು ಮಿಶ್ರಣ ಮಾಡಿ ಅನ್ವಯಿಸಿ. ಇದು ಅಪಾಯಕಾರಿ ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡುತ್ತದೆ ಮತ್ತು ಅವುಗಳ ಬೆಳವಣಿಗೆಯನ್ನು ಪ್ರತಿಬಂಧಿಸುತ್ತದೆ. ಈ ಕುರಿತು ಹಲವ ಅಧ್ಯಯನಗಳೂ ಕೂಡ ಸಾಬೀತುಪಡಿಸಿವೆ.

​ಕೆಮ್ಮಿಗೆ ಪರಿಹಾರ ನೀಡುತ್ತದೆ

ವಾತಾವರಣ ಬದಲಾವಣೆ, ಆಹಾರ ಸೇವನೆಯಲ್ಲಿ ವ್ಯತ್ಯಾಸವಾದರೆ ಶ್ವಾಸಕೋಶದಲ್ಲಿ ಕಫ ಕಟ್ಟುತ್ತದೆ. ಇದು ಶೀತ, ಕೆಮ್ಮಿಗೆ ಕಾರಣವಾಗುತ್ತದೆ. ಇದನ್ನು ಹೋಗಲಾಡಿಸಲು ಈರುಳ್ಳಿ ಮತ್ತು ಜೇನುತುಪ್ಪ ಸಹಾಯ ಮಾಡುತ್ತದೆ. ಇತರ ಔಷಧಗಳಿಗಿಂತ ಪರಿಣಾಮಕಾರಿಯಾಗಿ ಕೆಮ್ಮನ್ನು ನಿವಾರಿಸಲು ಜೇನುತುಪ್ಪವನ್ನು ಬಳಸಬಹುದು.

ಈರುಳ್ಳಿಯು ಸಲ್ಫರ್ ಸಂಯುಕ್ತಗಳನ್ನು ಹೊಂದಿದ್ದು ಅದು ಲೋಳೆಯ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಗಂಟಲು ನೋವನ್ನು ಕೂಡ ಇದು ಶಮನ ಮಾಡುತ್ತದೆ. ಹೀಗಾಗಿ, ಈರುಳ್ಳಿ ಮತ್ತು ಜೇನುತುಪ್ಪವನ್ನು ತೆಗೆದುಕೊಳ್ಳುವುದರಿಂದ ಕೆಮ್ಮು ಮತ್ತು ಬ್ರಾಂಕೈಟಿಸ್‌ಗೆ ಸುಲಭವಾದ ಚಿಕಿತ್ಸೆ ನೀಡಬಹುದು.

​ಹೃದಯದ ಆರೋಗ್ಯಕ್ಕೆ ಒಳ್ಳೆಯದು

ಉತ್ತಮ ತರಕಾರಿಯಾಗಿರುವ ಈರುಳ್ಳಿ ಕಡಿಮೆ ಕೊಬ್ಬಿನಾಂಶವನ್ನು ಹೊಂದಿದೆ. ಅದೇ ರೀತಿ ಜೇನುತುಪ್ಪ ಸ್ವಲ್ಪ ಪ್ರಮಾಣದ ಕೊಬ್ಬಿನಾಂಶವನ್ನು ಹೊಂದಿದ್ದರೂ ಹೆಚ್ಚಿನ ಪ್ರಮಾಣದ ಕ್ಯಾಲೋರಿಗಳನ್ನು ಅಡಕವಾಗಿರಿಸಿಕೊಂಡಿದೆ. ಹೀಗಾಗಿ ನೀವು ಈರುಳ್ಳಿ ಮತ್ತು ಜೇನುತುಪ್ಪವನ್ನು ಸೇರಿಸಿ ತಿಂದರೆ ಹೃದಯದ ಆರೋಗ್ಯವನ್ನೂ ಕಾಪಾಡಿಕೊಳ್ಳಬಹುದಾಗಿದೆ.

ಈರುಳ್ಳಿ ಮತ್ತು ಜೇನುತುಪ್ಪವು ಪೊಟ್ಯಾಸಿಯಮ್ ಮತ್ತು ಇತರ ಅದ್ಭುತ ಖನಿಜಗಳಿಂದ ಸಮೃದ್ಧವಾಗಿರುವುದರಿಂದ, ನಿಮ್ಮ ಹೃದಯದ ಆರೋಗ್ಯವನ್ನು ಹೆಚ್ಚಿಸಲು ಸಹಾಯಕವಾಗಿದೆ.

ಈರುಳ್ಳಿ ಮತ್ತು ಜೇನುತುಪ್ಪವನ್ನು ತೆಗೆದುಕೊಳ್ಳುವುದು ರಕ್ತದೊತ್ತಡವನ್ನು ಕಡಿಮೆ ಮಾಡಲು, ರಕ್ತದ ಕೊಬ್ಬಿನ ಮಟ್ಟವನ್ನು ಸುಧಾರಿಸಲು, ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಹೃದಯ ಬಡಿತವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ.

​ಕ್ಯಾನ್ಸರ್‌ ಕೋಶಗಳನ್ನು ತಡೆಗಟ್ಟುತ್ತದೆ

ಈರುಳ್ಳಿ ಮತ್ತು ಜೇನುತುಪ್ಪದ ಸೇವನೆಯಿಂದ ದೇಹದಲ್ಲಿ ಕ್ಯಾನ್ಸರ್‌ ಕೋಶಗಳ ಬೆಳವಣಿಗೆಯನ್ನು ತಡೆಗಟ್ಟುತ್ತದೆ. ಈ ವಿಶಿಷ್ಟವಾದ ಸಂಯೋಜನೆಯು ವಿಟಮಿನ್ ಸಿ ಯಂತಹ ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ, ಇದು ಜೀವಕೋಶದ ಕಾರ್ಯಚಟುವಟಿಕೆಗೆ ಹಾನಿ ಮಾಡುವ ಅಂಶಗಳನ್ನು ದೇಹದಿಂದ ಹೊರಹಾಕುವಲ್ಲಿ ಸಹಾಯ ಮಾಡುತ್ತದೆ. ಫ್ಲೇವನಾಯ್ಡ್‌ಗಳಂತಹ ಫೈಟೊಕೆಮಿಕಲ್‌ಗಳನ್ನು ಸಹ ಒಳಗೊಂಡಿದ್ದು, ಅಜೀರ್ಣವಾಗು ಪದಾರ್ಥಗಳನ್ನು ದೇಹದಿಂದ ಹೊರಹಾಕಲು ಸಹಾಯ ಮಾಡುತ್ತದೆ.

​ವೀರ್ಯದ ಉತ್ಪಾದನೆ ಹೆಚ್ಚಿಸುತ್ತದೆ
ಈರುಳ್ಳಿ ಮತ್ತು ಜೇನುತುಪ್ಪದ ಸೇವನೆ ಸೀರಮ್ ಟೆಸ್ಟೋಸ್ಟೆರಾನ್ ಸಾಂದ್ರತೆ, ವೀರ್ಯ ಎಣಿಕೆ ಮತ್ತು ಫಲವತ್ತತೆಯನ್ನು ಸುಧಾರಿಸುತ್ತದೆ. ಜೇನುತುಪ್ಪವು ವಿಟಮಿನ್ ಬಿ, ಕಬ್ಬಿಣ, ಕ್ಯಾಲ್ಸಿಯಂ ಮತ್ತು ಅಮೈನೋ ಆಮ್ಲದ ಅಂಶದಿಂದಾಗಿ ಮೊಟ್ಟೆಯ ಗುಣಮಟ್ಟ ಮತ್ತು ಸಾಮಾನ್ಯ ಫಲವತ್ತತೆಯನ್ನು ಹೆಚ್ಚಿಸುತ್ತದೆ ಎಂದು ಹೇಳಲಾಗುತ್ತದೆ.

ಈರುಳ್ಳಿಯು ಉತ್ಕರ್ಷಣ ನಿರೋಧಕಗಳು ಮತ್ತು ಫ್ಲೇವನಾಯ್ಡ್‌ಗಳ ಅತ್ಯುತ್ತಮ ಮೂಲವಾಗಿದೆ, ಇದು ವೀರ್ಯದ ಪ್ರಮಾಣ ಮತ್ತು ಎಣಿಕೆಯ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಆದರೆ ಈ ರೀತಿಯ ಮದ್ದುಗಳನ್ನು ಮಾಡುವ ಮೊದಲು ವೈದ್ಯರನ್ನು ಸಂಪರ್ಕಿಸಿ ಸಲಹೆ ಪಡೆಯುವುದು ಒಳ್ಳೆಯದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment